ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೊಪ್ಪಳ ವಿವಿ ಕುಲಪತಿಗಳಾದ ಡಾ. ಬಿ.ಕೆ.ರವಿ ಅವರ "ಮೀಡಿಯಾ ಆಫ್ ದಿ ಮಿಲೇನಿಯಂ" ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. 

ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು. ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು. 

ಡಾ ಬಿ.ಕೆ.ರವಿ ಅವರಿಗೆ ಬರೆಯುವ ಶಕ್ತಿ ಇದೆ. ಇದುವರೆಗೂ ಒಂಬತ್ತು ಕೃತಿಗಳನ್ನು ರಚಿಸಿದ್ದಾರೆ. ಮಾಧ್ಯಮ ಸಾಕ್ಷರತೆ ಕುರಿತಾದ ಈ ಹೊಸ ಪುಸ್ತಕ ಮಾಧ್ಯಮ ಕ್ಷೇತ್ರದ ಅರಿವನ್ನು ವಿಸ್ತರಿಸಲಿ. ವೃತ್ತಿಧರ್ಮ ಕಾಪಾಡಿಕೊಂಡರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡಲು ಪತ್ರಕರ್ತರು ಮುಂದಾಗಬೇಕು. ಸಂವಿಧಾನ ಉಳಿದರೆ ಪತ್ರಿಕಾ ವೃತ್ತಿಯ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.