ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.