ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತ ಯಾತ್ರಾ ಕೇಂದ್ರ ಮತ್ತು ಲೋಕನಾಯಕ ಜೆ.ಪಿ. ವಿಚಾರ ವೇದಿಕೆ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಹಮ್ಮಿಕೊಂಡಿದ್ದ ಜಯಪ್ರಕಾಶ್ ನಾರಾಯಣ್ ಅವರ 122ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜೆ.ಪಿ.ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಸಮಾರಂಭದಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಡಾ.ಬಿ.ಎಲ್.ಶಂಕರ್, ಸಮಾಜವಾದಿ ಚಿಂತಕ ನಟರಾಜ್ ಹುಳಿಯಾರ್, ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಾ.ಎಂ.ಪಿ.ನಾಡಗೌಡ, ಮೋಹನ ಕೊಂಡಜ್ಜಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಉಪಸ್ಥಿತರಿದ್ದರು.