ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಆಯೋಜಿಸಿದ್ದ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು.

ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂದ ಬ್ರಿಟಿಷರ ಬೃಹತ್ ಸೈನ್ಯಕ್ಕೆ ಸೆಡ್ಡು ಹೊಡೆದ ಧೀಮಂತ ರಾಣಿ. ಈಕೆಯ ಧೈರ್ಯ ಮತ್ತು ಆದರ್ಶ ಯುವ ಸಮೂಹವನ್ನು, ಇವತ್ತಿನ ಪೀಳಿಗೆಯನ್ನು ತಲುಪಬೇಕು ಎನ್ನುವ ಕಾರಣಕ್ಕೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಮತ್ತು ಜಯಂತೋತ್ಸವವನ್ನು ಆರಂಭಿಸಿದ್ದೆ. ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.