ಸಿಎಂ ಸಿದ್ದರಾಮಯ್ಯ ಅವರು ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಚರ್ಚಿಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಬೇಕು.
ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.