ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಾಲ್ಮೀಕಿಯವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಣ್ಯರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ|| ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದರಾದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.