ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಸಮಾಜದ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ, ಸಮುದಾಯದ ಹಿತಾಸಕ್ತಿ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಡಾ|| ಹೆಚ್.ಸಿ ಮಹದೇವಪ್ಪ, ಮಾಜಿ ಸಚಿವ ವೆಂಕಟರಮಣಪ್ಪ, ಶಾಸಕರಾದ ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.