ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ' ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

  ರಾಜ್ಯ ಸರ್ಕಾರ ಪಡಿತರ ವಿತರಕರಿಗೆ ಕಮಿಷನ್ ಹೆಚ್ಚಳ ಮಾಡಬೇಕು ಹಾಗೂ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ವ್ಯಕ್ತಿಗೆ 10 ಕೆಜಿ ನೀಡಬೇಕೆಂದು ಒತ್ತಾಯಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಕೃಷ್ಣ ಡಿ ನಾಯ್ಕ, ಪ್ರಧಾನ ಕಾರ್ಯದರ್ಶಿಯಾದ ಎಂ ಕೆ ರಾಮಚಂದ್ರ ಹಾಗೂ ಬೆಂಗಳೂರು ನಗರ ಅಧ್ಯಕ್ಷರಾದ ಕುಮಾರ್ ಅವರು ಉಪಸ್ಥಿತರಿದ್ದರು.