ನವೆಂಬರ್ 12, 2023

ಬೆಂಗಳೂರಿನ ನಯನ ಸಭಾಂಗಣದಲ್ಲಿ ಶ್ರೀ ಆಧ್ಯ ಫೌಂಡೇಷನ್ ವತಿಯಿಂದ "ಕಾರ್ತಿಕೋತ್ಸವ ಕನ್ನಡ ರಾಜ್ಯೋತ್ಸವ ಸಂಭ್ರಮ - 2023" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

   ಈ ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಲೋಕಾಯುಕ್ತರಾದ ನ್ಯಾ. ಸಂತೋಷ್ ಹೆಗ್ಡೆ ಅವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ಗಳು ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಜೊತೆಗೆ ಹೋದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 70ಕ್ಕೂ ಹೆಚ್ಚು ಸಾಧಕರಿಗೆ ಸನ್ಮಾನ ಮಾಡಲಾಯಿತು. ಶ್ರೀ ಆದ್ಯ ಫೌಂಡೇಶನ್ ಅಧ್ಯಕ್ಷರಾದ ಶ್ರೀಮತಿ ಸುನಿತಾ ರೆಡ್ಡಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.