ನವೆಂಬರ್ 23, 2023

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ದಲಿತ ಸಂಘರ್ಷ ಸಮಿತಿ'ಯ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರು ಪತ್ರಿಕೆಗೋಷ್ಠಿ ಹಮ್ಮಿಕೊಂಡಿದ್ದರು.

  ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ನಿ.ನ್ಯಾ. ಎ. ಜೆ. ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜು ಆಯೋಗದ ವರದಿ ಮಂಡನೆಗೆ ಅಗ್ರಹಿಸಿ ನವೆಂಬರ್ 29ರಂದು ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಡಾ|| ಎನ್. ಮೂರ್ತಿ ಅವರು ಮಾಧ್ಯಮಗಳಿಗೆ ತಿಳಿಸಿದರು.

  ಜತೆಗೆ ನವೆಂಬರ್ 29ರಂದು ಫ್ರೀಡಂ ಪಾರ್ಕ್ ನಿಂದ ಮುಖ್ಯಮಂತ್ರಿ ನಿವಾಸಕ್ಕೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಮತ್ತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿಗಳ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಡಾ || ಎನ್. ಮೂರ್ತಿ ಅವರು ತಿಳಿಸಿದರು.