ನವೆಂಬರ್ 29, 2023
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ದಲಿತ ಸಂಘರ್ಷ ಸಮಿತಿ' ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ನಿ.ನ್ಯಾ. ಎ. ಜೆ. ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜು ಆಯೋಗದ ವರದಿ ಮಂಡನೆ ಮಾಡಬೇಕೆಂದು ಡಾ || ಎನ್. ಮೂರ್ತಿ ಅವರು ಒತ್ತಾಯಿಸಿದರು.