December 4, 2023
ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ.! ಕಾಡಾನೆ ಜತೆಗಿನ ಹೋರಾಟದಲ್ಲಿ ವೀರಮರಣ ಹೊಂದಿದ ಅರ್ಜುನ
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು. 8 ಬಾರಿ ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ.
ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ.