December 8, 2023
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ (AIGDSU), ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟ (NUGDS) ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಸೇವಾ ಷರತ್ತುಗಳಿಗೆ ಸಂಬಂಧಿಸಿದಂತೆ ಅಂಚೆಸೇವಕರಿಗೆ ಅನ್ಯಾಯವಾಗುತ್ತಿದೆ. ಜೊತೆಗೆ ಅಂಚೆ ಸೇವಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಅಂಚೆ ಸೇವಕರ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪಂಚೆಸೇವಕರು ಡಿಸೆಂಬರ್ 12 ರಿಂದ ಜಾರಿಗೆ ಬರುವಂತೆ ದೇಶದಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.