December 15, 2023
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ಬಾಬು ಎಸ್. ಕುಂಬಾರ್ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಕುಂಬಾರ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಾಬು ಎಸ್. ಕುಂಬಾರ್ ಅವರು ಒತ್ತಾಯಿಸಿದರು. ಕುಂಬಾರ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ನಡೆಸುತ್ತಿದ್ದು, ಜನಾಂಗಕ್ಕೆ ಅರಿವು ಮೂಡಿಸಬೇಕು. ಕುಂಬಾರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು.
ಕುಂಬಾರ ಸಮುದಾಯದ ಅಭಿವೃದ್ಧಿ ನಿಗಮವು 2023ರ ಮಾರ್ಚ್ 18ರಂದು ಸರ್ಕಾರದಿಂದ ರಚನೆಯಾಗಿದೆ, ನಿಗಮಕ್ಕೆ ಅರ್ಹ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು. ಕುಂಬಾರ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ನೂರು ಕೋಟಿ ರೂಪಾಯಿಗಳನ್ನು ಅನುದಾನವಾಗಿ ಬಿಡುಗಡೆ ಮಾಡಬೇಕೆಂದು ಬಾಬು ಎಸ್. ಕುಂಬಾರ್ ಅವರು ಒತ್ತಾಯಿಸಿದರು.