December 19, 2023
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕರ್ನಾಟಕದಲ್ಲಿ ಬರ ಹಿನ್ನಲೆಯಲ್ಲಿ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಮನವಿ ಸಲ್ಲಿಸಿದರು.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ತಿಳಿಸಿದರು.
ಬರದಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು 'ಎಕ್ಸ್,' ಖಾತೆಯಲ್ಲಿ ತಿಳಿಸಿದ್ದಾರೆ.