December 26, 2023 

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿ.ಎಂ.ಟಿ.ಸಿ ಸಂಸ್ಥೆಯ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದರು. 

ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ , ಶಾಸಕ ರಿಜ್ವಾನ್ ಅರ್ಶದ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.