ಜನವರಿ 2, 2024 

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ಡಾ|| ಬಿ. ಮೌಲಾಲಿ ಅವರು ಮಾತನಾಡಿದರು. 

  ಕರ್ನಾಟಕ ರಾಜ್ಯ ಗಂಗಾಮತ, ಬೆಸ್ತ, ಮೊಗವೀರ, ಕೋಲಿ, ಕಬ್ಬಲಿಗ, ಅಂಬಿಗ ಸಮುದಾಯಕ್ಕೆ ಸೇರಿದ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ವತಿಯಿಂದ ಭಾರತೀಯ ಜನತಾ ಪಾರ್ಟಿಯ ಪ್ರಮುಖರನ್ನು ಒತ್ತಾಯಿಸಿದರು.