ಜನವರಿ 3, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು " ಸೇವಾ ಇನ್ ಆಕ್ಷನ್" ಸಮಸ್ಯೆಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

  ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಕಾಲೇಜಿನಲ್ಲಿ ಜನವರಿ 6ರಂದು ವಿಶೇಷ ಚೇತನ ವಿದ್ಯಾರ್ಥಿಗಳಿಗಾಗಿ "ಕ್ವಿಜೇಬಲ್ಡ್ - Quizabled" ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.

   ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ವಿಶೇಷ ಚೇತನ ಮಕ್ಕಳು ಭಾಗವಹಿಸಲಿದ್ದಾರೆ. ವಿಜೇತರಿಗೆ ನಗದು ಬಹುಮಾನ ಸೇರಿದಂತೆ ಅತ್ಯಾಕರ್ಷಕ ಬಹುಮಾನ ದೊರೆಯಲಿದೆ.