ಜನವರಿ 5, 2024
ರಾಯಚೂರು ಜಿಲ್ಲೆಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾಮಠವಾದ ತಿಂಥಣಿಬ್ರಿಜ್ ಮಠದಲ್ಲಿ ಜನವರಿ 12 ರಿಂದ 14ರವರೆಗೆ ಹಾಲುಮತ ಸಂಸ್ಕೃತಿ ವೈಭವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್ ಅವರು ಮಾಧ್ಯಮಗಳಿಗೆ ತಿಳಿಸಿದರು.