ಜನವರಿ 6, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಉತ್ತರ ಕರ್ನಾಟಕ ಹೋರಾಟ ಸಮಿತಿ" ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

ಈ ಪತ್ರಿಕಾಗೋಷ್ಠಿಯಲ್ಲಿ ಭೀಮಪ್ಪ ಗುಂ. ಗಡಾದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

 ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರು ಗ್ರಾಮದಲ್ಲಿ ಫೆಬ್ರವರಿ 25, 26ರಂದು " ಉತ್ತರ ಕರ್ನಾಟಕ ಉಸ್ತವ - 2024 ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು

ಭೀಮಪ್ಪ ಗುಂ. ಗಡಾದ ಅವರು ಮಾಧ್ಯಮಗಳಿಗೆ ತಿಳಿಸಿದರು. ಈ ಬೃಹತ್ ಸಮಾವೇಶವು ಉತ್ತರ ಕರ್ನಾಟಕ ಹೋರಾಟ ಸಮಿತಿ ಹಾಗೂ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟದ ಸಹಯೋಗದಲ್ಲಿ ನಡೆಯಲಿದೆ. 

  ಜತೆಗೆ ಉತ್ತರ ಕರ್ನಾಟಕದ ಜನರು ಎಲ್ಲಾ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಹಾಗಾಗಿ ಪ್ರತ್ಯೇಕ ರಾಜ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.