ಜನವರಿ 17, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
"ರಾಷ್ಟೀಯ ಶಿಕ್ಷಣ ನೀತಿ" (NEP) ಗುಣಾತ್ಮಕ ಶಿಕ್ಷಣ ಪದ್ಧತಿಯಾಗಿದೆ. ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಮರ್ಪಕವಾಗಿದೆ. ಹಾಗಾಗಿ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕಾಲೇಜುಗಳಲ್ಲಿ ರಾಷ್ಟೀಯ ಶಿಕ್ಷಣ ನೀತಿಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಯಾದ ವೇಣುಗೋಪಾಲ್, ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಯಾದ ಮಲ್ಲೇಪುರಂ ವೆಂಕಟೇಶ್ ಅವರು ಉಪಸ್ಥಿತರಿದ್ದರು.