ಜನವರಿ 23, 2024 

   ಬೆಂಗಳೂರಿನ ಎನ್.ಜಿ.ಒ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಸದಸ್ಯರು ಸಭೆ ನಡೆಸಿದರು.

    ಈ ಸಭೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳು ಸವಾಲುಗಳು ಹಾಗೂ ಪರಿಹಾರೋಪಾಯಗಳ ಬಗ್ಗೆ ಸವಿಸ್ತಾರವಾದ ಚರ್ಚೆ ನಡೆಸಲಾಯಿತು. ಪ್ರಮುಖವಾದ ಈ ಸಭೆಯಲ್ಲಿ ಸಂಘ ಅಧ್ಯಕ್ಷರಾದ ಮಲ್ಲಿಕಾರ್ಜುನ ಬಳ್ಳಾರಿ ಅವರು ಉಪಸ್ಥಿತರಿದ್ದರು.

     ಆರೋಗ್ಯ ಇಲಾಖೆಯಲ್ಲಿನ ವಿವಿಧ ಸಮಸ್ಯೆಗಳ ಬಗ್ಗೆ ಅನೇಕ ಸದಸ್ಯರು ಮಲ್ಲಿಕಾರ್ಜುನ ಬಳ್ಳಾರಿ ಅವರ ಗಮನಕ್ಕೆ ತಂದರು. ಎಲ್ಲಾ ಸಮಸ್ಯೆಗಳನ್ನು ಆಲಿಸಿದ ಮಲ್ಲಿಕಾರ್ಜುನ ಬಳ್ಳಾರಿ ಅವರು ಅತಿ ಶೀಘ್ರದಲ್ಲಿ ಆರೋಗ್ಯ ಸಚಿವರ ಚರ್ಚಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು.