ಜನವರಿ 29, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕೆಪಿಸಿಸಿ ಸದಸ್ಯರಾದ ಎ. ಮುನಿಯಪ್ಪ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ರಾಜ್ಯ ಸರ್ಕಾರ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಒಪ್ಪಿಕೊಂಡು, ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆ. ಹಾಗಾಗಿ ನಾವು ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇವೆ ಎಂದು ಎ. ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.

   ಎ.ಜೆ. ಸದಾಶಿವ ಆಯೋಗ ಅನುಷ್ಠಾನಕ್ಕೆ ಬಂದರೆ ಮಾದಿಗ ಸಮುದಾಯಕ್ಕೆ ಹೆಚ್ಚಿನ ಮೀಸಲಾತಿ ದೊರೆಯಲಿದೆ ಎಂದು ಎ. ಮುನಿಯಪ್ಪ ಅವರು ತಿಳಿಸಿದರು.