ಜನವರಿ 31, 2024

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ರಾಜ್ಯ ಸರ್ಕಾರವು ಬಂಜಾರ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

    ರಾಜ್ಯ ಸರ್ಕಾರ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬಾರದು. ವಿಧಾನಸಭಾ ಉಪಾಸಭಾಪತಿಗಳಾದ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಬೇಕು. ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡಬೇಕೆಂದು ಒತ್ತಾಯಿಸಿದರು.

   ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಡಿ. ಆರ್. ಗಿರೀಶ್, ಕಾರ್ಯಾಧ್ಯಕ್ಷರಾದ ಸುಧೀರ್ ಅಂಗಡಿ ಅವರು ಉಪಸ್ಥಿತರಿದ್ದರು.