ಫೆಬ್ರವರಿ 2, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಆನಂದ್ ಕೆ ಮಂಡ್ಯ ಅವರು ಮಾತನಾಡಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆ. 5ರಂದು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ 'ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ'ದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಮಂಡಳಿಯು 2023ರ ಫೆಬ್ರವರಿ 20ರಂದು ಸ್ಥಾಪನೆಯಾಗಿದೆ. ಆದರೆ ನಿಗಮ ಮಂಡಳಿ ಇದುವರೆಗೆ ಅನುಷ್ಠಾನಕ್ಕೆ ಬಂದಿಲ್ಲ ಹಾಗೂ ನಿಗಮ ಮಂಡಳಿಗೆ ರಾಜ್ಯ ಸರ್ಕಾರವು ಅಧಿಕೃತ ಕಚೇರಿ, ಅನುದಾನ ನೀಡಿರುವುದಿಲ್ಲ ಎಂದು ಆನಂದ್ ಕೆ ಮಂಡ್ಯ ಅವರು ಹೇಳಿದರು.