ಫೆಬ್ರವರಿ 3, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ' ಕರ್ನಾಟಕ ರಾಜ್ಯ ಸವಿತಾ ಕಲಾ ಸಂಘ' ದ ಸದಸ್ಯರ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಎನ್. ಶಿವಶಂಕರ್, ಅಧ್ಯಕ್ಷರಾದ ಕೆ. ಚಂದ್ರಶೇಖರ್ ಅವರು ಮಾತನಾಡಿದರು.
ಬೆಂಗಳೂರಿನ ಟೌನ್ ಹಾಲ್ ನಲ್ಲಿ ಫೆಬ್ರವರಿ 6ರಂದು 'ಕರ್ನಾಟಕ ರಾಜ್ಯ ಸವಿತಾ ಕಲಾ ಸಂಘ'ದ ವತಿಯಿಂದ "ರಾಜ್ಯಮಟ್ಟದ ಸವಿತಾ ಕಲಾ ಸಮ್ಮೇಳನ" ಹಾಗೂ ಬಿಹಾರ ರಾಜ್ಯದ ಮಾಜಿ ಮುಖ್ಯಮಂತ್ರಿ ಭಾರತ ರತ್ನ "ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಗೌರವ ಸಮರ್ಪಣೆ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗೌರವ ಅಧ್ಯಕ್ಷರಾದ ಎನ್ ಶಿವಶಂಕರ ಅವರು ಮಾಧ್ಯಮಗಳಿಗೆ ತಿಳಿಸಿದರು.
ಈ ಸಮ್ಮೇಳನದಲ್ಲಿ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಸವಿತಾ ಸಮುದಾಯದ ಆರು ಮಂದಿಗೆ ಕರ್ನಾಟಕ "ಸವಿತಾ ಕಲಾಶ್ರೀ" ಪ್ರಶಸ್ತಿ ನೀಡಲಾಗುವುದು ಎಂದು ಕೆ ಚಂದ್ರಶೇಖರ್ ಅವರು ತಿಳಿಸಿದರು.