ಫೆಬ್ರವರಿ 7, 2024
ಬೆಂಗಳೂರು ಪ್ರೆಸ್ನ ಕ್ಲಬ್ ನಲ್ಲಿ ಇಂದು ' ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ' ಹಾಗೂ 'ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ' ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಜಿ. ಮರಿಸ್ವಾಮಿ ಅವರಿಗೆ ಭಾರತೀಯ ಜನತಾ ಪಕ್ಷದಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಬಿಎಸ್ ಪರಮಶಿವಯ್ಯ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಎಸ್ ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿಯಾದ ಜಿ ಎಸ್ ಮೃತ್ಯುಂಜಯ ಸ್ವಾಮಿ ಅವರು ಉಪಸ್ಥಿತರಿದ್ದರು.