ಫೆಬ್ರವರಿ 9, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು " ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಬಿ. ದೇವರಾಜ್ ಅವರು ಮಾತನಾಡಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆಬ್ರವರಿ 11ರಂದು ಕಾರ್ಮಿಕರ ಹಕ್ಕುಗಳಿಗಾಗಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿ. ದೇವರಾಜ್ ಅವರು ಮಾಧ್ಯಮಗಳಿಗೆ ತಿಳಿಸಿದರು
ರಾಜ್ಯದಲ್ಲಿನ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ದೇವರಾಜ್ ಅವರು ತಿಳಿಸಿದರು.