February 9, 2024
ಕೇಂದ್ರ ಸರ್ಕಾರವು ದೇಶದ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹರ ರಾವ್, ಕೃಷಿ ತಜ್ಞ ಡಾ. ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದೆ.
ಮೂವರು ಶ್ರೇಷ್ಠ ನಾಯಕರು ದೇಶದ ಕೃಷಿ ಮತ್ತು ಆರ್ಥಿಕ ಅಭಿವೃದ್ಧಿಗೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದು, ಅವರ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಶ್ರೇಷ್ಠ ಗೌರವ ಭಾರತರತ್ನ ನೀಡಿರುವುದು ಭಾರತೀಯರೆಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ.