ಫೆಬ್ರವರಿ 10, 2024 

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಅಖಿಲ ಕರ್ನಾಟಕ ವಾದ್ಯಗೋಷ್ಠಿ ಕಲಾವಿದರ ಮಹಾಸಂಘ"ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ್ಯಕ್ಷರಾದ ಡಾ. ಆರ್. ಶಂಕರ್ ಅವರು ಮಾತನಾಡಿದರು.

  "ಅಖಿಲ ಕರ್ನಾಟಕ ವಾದ್ಯಗೋಷ್ಠಿ ಕಲಾವಿದರ ಮಹಾಸಂಘ"ದ 24ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಫೆಬ್ರವರಿ 12ರಂದು "ಅಪ್ಪು ನಮನ" ಕಾರ್ಯಕ್ರಮ ನಡೆಯಲಿದೆ ಎಂದು ಶಂಕರ್ ಅವರು ಮಾಧ್ಯಮಗಳಿಗೆ ತಿಳಿಸಿದರು.