ಫೆಬ್ರವರಿ 11, 2024
ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಶ್ರೀಮಠದ ಗದ್ದುಗೆಯ ದರ್ಶನ ಪಡೆದು ಭಕ್ತಿನಮನ ಸಲ್ಲಿಸಿ ನೂತನ ಅತಿಥಿ ಗೃಹದ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್, ಮಾಜಿ ಸಚಿವರಾದ ಸಿ. ಟಿ. ರವಿ, ಸಂಸದರಾದ ಪ್ರತಾಪ್ ಸಿಂಹ ಅವರುಗಳು ಉಪಸ್ಥಿತರಿದ್ದರು.