ಫೆಬ್ರವರಿ 10, 2024 

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ನೊಳಂಬ ಲಿಂಗಾಯತ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

  ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ಎಸ್.ಆರ್. ಪಾಟೀಲ್ ಅವರು ಮಾತನಾಡಿದರು.

  ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಜೆಸಿ ಮಾಧುಸ್ವಾಮಿ ಮತ್ತು ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂದೀಪ್ ಪಾಟೀಲ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

  ಈ ಸಂಘದ ಗೌರವ ಕಾರ್ಯದರ್ಶಿಗಳಾದ ಕೆ. ಬಿ. ಶಶಿಧರ್ ಕಾಮನಕೆರೆ ಹಾಗೂ ಖಜಾಂಚಿಯಾದ ಕೆ. ಬಿ. ರುದ್ರಪ್ಪ ಅವರು ಉಪಸ್ಥಿತರಿದ್ದರು.