ಫೆಬ್ರವರಿ 14, 2024 

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಕರ್ನಾಟಕ ರಾಜ್ಯ ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳ ಮಹಾಮಂಡಲ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ನೆ.ಲ. ನರೇಂದ್ರಬಾಬು ಅವರು ಮಾತನಾಡಿದರು.

   ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಕನಿಷ್ಠ ನಾಲ್ಕು ಕ್ಷೇತ್ರಗಳಲ್ಲಿ 2A ಸಣ್ಣಪುಟ್ಟ ಜಾತಿಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಬಿಜೆಪಿ ವರಿಷ್ಠರು ಅವಕಾಶ ನೀಡಬೇಕೆಂದು ನೆ.ಲ. ನರೇಂದ್ರಬಾಬು ಅವರು ಒತ್ತಾಯಿಸಿದರು.

  ಜೊತೆಗೆ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನಪರಿಷತ್ ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ನಂಜುಂಡ ಪ್ರಸಾದ್ ಅವರಿಗೆ ಬಿಜೆಪಿ ವರಿಷ್ಠರು ಅವಕಾಶ ಮಾಡಿಕೊಡಬೇಕೆಂದು ನೆ.ಲ. ನರೇಂದ್ರ ಬಾಬು ಅವರು ಒತ್ತಾಯಿಸಿದರು.

 ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸದಾನಂದ ಗೌಡರು ಸ್ಪರ್ಧಿಸದೆ ಇದ್ದ ಪಕ್ಷದಲ್ಲಿ, ಚುನಾವಣೆಗೆ ಸ್ಪರ್ಧಿಸಲು ನನಗೆ ಅವಕಾಶ ಮಾಡಿಕೊಡಬೇಕೆಂದು ನೆ.ಲ. ನರೇಂದ್ರಬಾಬು ಅವರು ಬಿಜೆಪಿ ವರಿಷ್ಠರನ್ನು ಒತ್ತಾಯಿಸಿದರು.