ಫೆಬ್ರವರಿ 20, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಪೌರಕಾರ್ಮಿಕರ ವಿವಿಧ ಸಂಘಟನೆಗಳ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ರಾಜ್ಯದಲ್ಲಿರುವ 24 ಸಾವಿರ ಪೌರಕಾರ್ಮಿಕರನ್ನು ರಾಜ್ಯ ಸರ್ಕಾರವು ಖಾಯಂಗೊಳಿಸಿ ಬಜೆಟ್ ನಲ್ಲಿ ಪ್ರಕಟಿಸಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇವೆ ಎಂದು ಮಾಧ್ಯಮಗಳಿಗೆ ತಿಳಿಸಿದರು.