ಫೆಬ್ರವರಿ 22, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ದಿಶಾ ಭಾರತ್' ಸಂಸ್ಥೆಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ದಿಶಾ ಭಾರತ್ ಸಂಸ್ಥೆಯ ಸಂಸ್ಥಾಪಕರಾದ ರೇಖಾ ರಾಮಚಂದ್ರನ್ ಅವರು ಮಾತನಾಡಿದರು.
ಬೆಂಗಳೂರಿನ ಆರ್ ವಿ ಟೀಚರ್ಸ್ ಕಾಲೇಜಿನ ಸಭಾಂಗಣದಲ್ಲಿ ಫೆಬ್ರವರಿ 24ರಂದು ದಿಶಾ ಭಾರತ್ ಸಂಸ್ಥೆಯ 20ನೇ ವರ್ಷಾಚರಣೆಯ ಅಂಗವಾಗಿ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೇಖಾ ರಾಮಚಂದ್ರನ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲು ಮತ್ತು ಯುವಕರಲ್ಲಿ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ಇಶಾ ಭಾರತ್ ಸಂಸ್ಥೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ ಎಂದು ರೇಖಾ ರಾಮಚಂದ್ರನ್ ಅವರು ತಿಳಿಸಿದರು.