ಫೆಬ್ರವರಿ 28, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ್ಯಕ್ಷರಾದ ಮಳವಳ್ಳಿ ಶ್ರೀನಿವಾಸ್ ಅವರು ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ 45 ಲಕ್ಷಕ್ಕೂ ಹೆಚ್ಚು ವಿಶ್ವಕರ್ಮ ಸಮಾಜದ ಜನರಿದ್ದಾರೆ. ಅವರು ಅನೇಕ ಸಮಸ್ಯೆಗಳಿಗೆ ಸಿಲುಕಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯದ ಜನರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾರ್ಚ್ 4ರಂದು ಅನಿರ್ದಿಷ್ಠಾವಧಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಳವಳ್ಳಿ ಶ್ರೀನಿವಾಸ ಅವರು ಮಾಧ್ಯಮಗಳಿಗೆ ತಿಳಿಸಿದರು.