ಮಾರ್ಚ್ 5, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಮಾಜಿ ಶಾಸಕರಾದ ಸಿ. ರಮೇಶ್ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ. ರಮೇಶ್ ಅವರು ಭಾರತೀಯ ಜನತಾ ಪಾರ್ಟಿಯು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. 

 ಜತೆಗೆ ಭಾರತೀಯ ಜನತಾ ಪಾರ್ಟಿಯಲ್ಲಿ ರಾಜ್ಯಮಟ್ಟದಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ಉಪಾಧ್ಯಕ್ಷನಾಗಲಿ ಅಥವಾ ಪ್ರಧಾನ ಕಾರ್ಯದರ್ಶಿಯಾಗಲಿ ಇಲ್ಲ ಎಂದು ಸಿ. ರಮೇಶ್ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಹಾಗೆಯೇ ಬಿಜೆಪಿ ಪಕ್ಷದ ವರಿಷ್ಠರು ಮಾಜಿ ಸಚಿವರಾದ ಗೋವಿಂದ ಕಾರಜೋಳ ಅವರ ಮಾತಿಗೆ ಹೆಚ್ಚು ಆದ್ಯತೆ ನೀಡಬಾರದು ಎಂದು ಸಿ ರಮೇಶ್ ಅವರು ಹೇಳಿದರು.