ಮಾರ್ಚ್ 8, 2024

ರಾಜ್ಯಸಭೆಗೆ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ನಾಮನಿರ್ದೇಶನ

ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ, ಪದ್ಮಶ್ರೀ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು 'X' ಖಾತೆಯಲ್ಲಿ ತಿಳಿಸಿದ್ದಾರೆ.