ಮಾರ್ಚ್ 15, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಭೀಮ್ ಆರ್ಮಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಡಿ ರಾಜ್ ಗೋಪಾಲ್ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತಲ ಪ್ರದೇಶಗಳಲ್ಲಿ KIADB ಅಧಿಕಾರಿಗಳು ಕಾನೂನುಬಾಹಿರವಾಗಿ ಪ್ರತಿಷ್ಠಿತ ಕಂಪನಿಗಳಿಗೆ ಭೂಮಿ ಹಂಚಿಕೆ ಮಾಡಿದ್ದಾರೆ ಎಂದು ಡಿ. ರಾಜ್ ಗೋಪಾಲ್ ಅವರು ಆರೋಪಿಸಿದರು.

 ಕೆಲವು ಪ್ರತಿಷ್ಠಿತ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಅಮಿನಿಟಿಸ್ ಸ್ಥಳಗಳನ್ನು ಹರಾಜು ಬದಲಾಗಿ ತರಾತುರಿಯಲ್ಲಿ ನೂರಾರು ಎಕರೆ ಜಮೀನನ್ನು KIADB ಅಧಿಕಾರಿಗಳು ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆ ಎಂದು ರಾಜ್ ಗೋಪಾಲ್ ಅವರು ಹೇಳಿದರು. ಇದೊಂದು ದೊಡ್ಡ ಮಟ್ಟದ ಹಗರಣವಾಗಿದ್ದು ಇದರಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ರಾಜಗೋಪಾಲ್ ಅವರು ಅಭಿಪ್ರಾಯಪಟ್ಟರು.

 ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಸಮಗ್ರ ತನಿಖೆ ನಡೆಸಬೇಕೆಂದು ರಾಜಗೋಪಾಲ್ ಒತ್ತಾಯಿಸಿದರು.