ಮಾರ್ಚ್ 15, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ - ಕರ್ನಾಟಕ' ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಾರ್ಚ್ 17ರಂದು "ಅತಿಥಿ ಶಿಕ್ಷಕರ ವಾರ್ಷಿಕ ರಾಜ್ಯ ಸಮ್ಮೇಳನ" ನಡೆಯಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

 ಈ ಸಮ್ಮೇಳನವನ್ನು ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.