ಮಾರ್ಚ್ 27, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಭೀಮಫುತ್ರಿ ಬ್ರಿಗೇಡ್' ಸೇರಿದಂತೆ ವಿವಿಧ ಸಂಘಟನೆಗಳ ರಾಜ್ಯಾಧ್ಯಕ್ಷರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಭೀಮಪುತ್ರಿ ರೇವತಿ ರಾಜ್ ಅವರು ಮಾತನಾಡಿದರು.

  ಸಮಾಜ ಕಲ್ಯಾಣ ಇಲಾಖೆಯ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನೆಪದಲ್ಲಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಝೇಂಕಾರ ಅಡ್ವರ್ಟೈಸಿಂಗ್ ಏಜೆನ್ಸಿಗೆ ಕಾನೂನುಬಾಹಿರವಾಗಿ ನೀಡಲಾಗಿದೆ ಎಂದು ರೇವತಿರಾಜ್ ಅವರು ಆರೋಪಿಸಿದರು.

 ಸಮಾಜ ಕಲ್ಯಾಣ ಇಲಾಖೆಯ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಮಣಿವಣ್ಣನ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜನರಲ್ ಮ್ಯಾನೇಜರ್ ಆದ ಬಿ.ಜೆ. ಪದ್ಮನಾಭ ಹಾಗೂ ವಾರ್ತಾ ಇಲಾಖೆಯ ಅಧಿಕಾರಿ ಮುರುಳಿಧರ್ ಅವರು ಝೇಂಕಾರ ಅಡ್ವರ್ಟೈಸಿಂಗ್ ಏಜೆನ್ಸಿಗೆ 5 ಕೋಟಿ 49 ಲಕ್ಷ ರೂಪಾಯಿ ಹಣ ನೀಡಿದ್ದಾರೆ ಎಂದು ತಿಳಿಸಿದರು. ಆದರೆ ಸಮಾಜ ಕಲ್ಯಾಣ ಇಲಾಖೆಯ ಕಲ್ಯಾಣ ಕಾರ್ಯಕ್ರಮಗಳ ಜಾಹೀರಾತಿಗೆ 2 ಕೋಟಿ 30 ಲಕ್ಷ ರೂಪಾಯಿ ನಿಗದಿ ಮಾಡಲಾಗಿತ್ತು. ಆದರೆ ಈ ಮೇಲ್ಕಂಡ ಹಿರಿಯ ಅಧಿಕಾರಿಗಳು ಭ್ರಷ್ಟಾಚಾರ ಎಸಗಿ ಸರ್ಕಾರದ ಬೊಕ್ಕಸಕ್ಕೆ 3 ಕೋಟಿ 19 ಲಕ್ಷ ರೂಪಾಯಿ ನಷ್ಟವಾಗುವಂತೆ ಮಾಡಿದ್ದಾರೆ ಎಂದು ರೇವತಿ ರಾಜ್ ಆರೋಪಿಸಿದರು.

 ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಾಹೀರಾತು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಝೇಂಕಾರ ಅಡ್ವರ್ಟೈಸಿಂಗ್ ಏಜೆನ್ಸಿಗೆ 5 ಕೋಟಿ 49 ಲಕ್ಷ ರೂಪಾಯಿ ಹಣ ನೀಡಲಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ರೇವತಿ ರಾಜು ಅವರು ಆಗ್ರಹಿಸಿದರು.

 ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ. ಸಿ ಎಸ್ ರಘು, ಜೈ ಭೀಮ್ ಅಖಿಲ ಭಾರತ ದಲಿತ ಹೋರಾಟ ಸಮಿತಿಯ ರಾಜ್ಯದ್ಯಕ್ಷರಾದ ಎಂ.ಎಂ ರಾಜು, ಭಾರತೀಯ ಬುಡಕಟ್ಟು ಬ್ರಿಗೇಡ್ ರಾಜ್ಯಾಧ್ಯಕ್ಷರಾದ ದಿವಿಲ್ ಕುಮಾರ್, ಜೈ ಭೀಮ್ ಸೇವೆಯ ರಾಜ್ಯಧ್ಯಕ್ಷರಾದ ಎನ್. ಅನಂತ್ ಅವರು ಉಪಸ್ಥಿತರಿದ್ದರು.