ಮಾರ್ಚ್ 30, 2024
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಸೇವಾದಳದ ರಾಜ್ಯ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಭಾಗವಸಿದ್ದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೇವಾದಳದ ರಾಜ್ಯ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು.
ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸವಾಗಿದೆ. ಅದರಂತೆ ದೇಶ ಕಟ್ಟುವಲ್ಲಿ ಕಾಂಗ್ರೆಸ್ ಸೇವಾದಳದ ಪಾತ್ರವೂ ಮಹತ್ವದ್ದಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸಮಾಜದಲ್ಲಿ ಇಂದಿಗೂ ಸೇವಾದಳ ಉತ್ತಮ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಗೆ ನಾವೆಲ್ಲಾ ಸಿದ್ಧರಾಗಬೇಕಾಗಿದ್ದು, ಅದಕ್ಕಾಗಿ ಸೇವಾದಳ, ಯುವ ಕಾಂಗ್ರೆಸ್ , ಮಹಿಳಾ ಕಾಂಗ್ರೆಸ್ ಘಟಕಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಅಲ್ಲದೆ ಕಾಂಗ್ರೆಸ್'ನ ನ್ಯಾಯ ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು. ಈ ಮೂಲಕ ನಾವೆಲ್ಲರೂ ಚುನಾವಣೆಯಲ್ಲಿ ಗೆಲುವು ಪಡೆಯಲು ಶ್ರಮಿಸೋಣ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರೋಣ ಎಂದು ಸೇವಾದಳದ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.