ಏಪ್ರಿಲ್ 1, 2024 

ಮಾಜಿ ಸಚಿವರಾದ ಡಾ.ಕೆ. ಸುಧಾಕರ್ ಅವರು ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ (ಎನ್ ಡಿಎ) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವರಾದ ಎಂ.ಟಿ.ಬಿ. ನಾಗರಾಜ್, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜ್, ದೇವನಹಳ್ಳಿಯ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಇ.ಕೃಷ್ಣಪ್ಪ ಉಪಸ್ಥಿತರಿದ್ದರು.

 ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜತೆಗಿದ್ದರು.