ಏಪ್ರಿಲ್ 3, 2024 

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜೀವ್ ಗೌಡ ಅವರು ನಾಮಪತ್ರ ಸಲ್ಲಿಸಿದರು. 

  ಬೆಂಗಳೂರಿನ ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ರಾಜೀವ್ ಗೌಡ ಅವರು ನಾಮಪತ್ರ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೆವಾಲ, ಸಚಿವರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್ ಅವರು ಉಪಸ್ಥಿತರಿದ್ದರು. 

  ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಸಾವಿರಾರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜತೆಗೆ ರಾಜೀವ್ ಗೌಡ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದರು.