ಏಪ್ರಿಲ್ 3, 2024
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಎನ್.ಡಿ.ಎ ಅಭ್ಯರ್ಥಿಯಾಗಿ ಶೋಭ ಕರಂದ್ಲಾಜೆ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಶಾಸಕರಾದ ಗೋಪಾಲಯ್ಯ ಎಸ್. ಮುನಿರಾಜು, ಭೈರತಿ ಬಸವರಾಜು ಅವರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಶೋಭ ಕರಂದ್ಲಾಜೆ ಅವರು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಜತೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದರು.