ಏಪ್ರಿಲ್ 8, 2024

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾದ ಶೋಭ ಕರಂದ್ಲಾಜೆ ಅವರು ಇಂದು ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತ ಪ್ರಚಾರ ಕೈಗೊಂಡರು. 

 ಕೆಆರ್ ಪುರಂ ನ ಖಾಸಗಿ ಕಲ್ಯಾಣ ಮಂಟಪದಲ್ಲಿ ಬೂತ್ ಮಟ್ಟದ ಬಿಜೆಪಿ ಪದಾಧಿಕಾರಿಗಳ ಸಭೆ ಹಮ್ಮಿಕೊಳ್ಳಲಾಗಿತ್ತು.

   ಈ ಸಭೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯರಾದ ರಮೇಶ್ ಗೌಡ, ಬಿಬಿಎಂಪಿ ಸದಸ್ಯರಾದ ಆಂಥೋನಿ ಸ್ವಾಮಿ, ಜಯಪ್ರಕಾಶ್, ಶ್ರೀಕಾಂತ್ ಸೇರಿದಂತೆ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.