ಏಪ್ರಿಲ್ 15, 2024
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಎಂ. ಮುನಿಗಂಗಪ್ಪ ಅವರು ಸ್ಪರ್ಧಿಸಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಎಂ. ಮುನಿಗಂಗಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
ಕೋಲಾರ ಲೋಕಸಭಾ ಕ್ಷೇತ್ರದ ಎಲ್ಲಾ ವರ್ಗಗಳ ಜನರ ಉದ್ದಾರವೇ ನನ್ನ ಪ್ರಮುಖ ಗುರಿಯಾಗಿದೆ. ಹಾಗಾಗಿ ಕೋಲಾರ ಲೋಕಸಭಾ ಕ್ಷೇತ್ರದ ಜನರು ಏಪ್ರಿಲ್ 26ರಂದು ನಡೆಯಲಿರುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 13 ರ ಟೆಲಿಫೋನ್ ಗುರುತಿಗೆ ತಮ್ಮ ಅಮೂಲ್ಯವಾದ ಮತ ನೀಡಬೇಕೆಂದು ಎಂ. ಮನಿಗಂಗಪ್ಪ ಅವರು ಮತದಾರರನ್ನು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಕಳೆದ 40 ವರ್ಷಗಳಿಂದ ದುಡಿದಿದ್ದೇನೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಕಡೆಗಣಿಸಿದರು ಎಂದು ಎಂ. ಮುನಿಗಂಗಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು. ಹಾಗಾಗಿ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಮುನಿಗಂಗಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.