ಏಪ್ರಿಲ್ 20, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ಟ್ರೇಡ್ ಯೂನಿಯನ್ ಸೆಂಟರ್' ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಜಿ. ಆರ್. ಶಿವಶಂಕರ್ ಅವರು ಮಾತನಾಡಿದರು.
ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ "ಕರ್ಲಾನ್ ಎಂಟರ್ಪ್ರೈಸಸ್ ಕಾರ್ಖಾನೆ"ಯನ್ನು ಮುಚ್ಚಿ 110ಕ್ಕೂ ಹೆಚ್ಚು ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದಾರೆಂದು ಆರೋಪಿಸಿದರು.