ಏಪ್ರಿಲ್ 24, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಕೆಪಿಸಿಸಿ ಮಾನವ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ. ಯೂನಾಸ್ (ಜೊನ್ಸ್) ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅನುಷ್ಠಾನಕ್ಕೆ ತಂದಿದೆ. ಹಾಗಾಗಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಡಾ. ಯೂನಾಸ್ (ಜೊನ್ಸ್) ಅವರು ಮನವಿ ಮಾಡಿದರು.