ಏಪ್ರಿಲ್ 25, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿನ 196 ತಾಲೂಕುಗಳು ತೀವ್ರ ಬರಗಾಲ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬರ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಿತ್ತು.
ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಶೀಘ್ರವೇ ಬರ ಪರಿಹಾರವನ್ನು ವಿತರಣೆ ಮಾಡಬೇಕೆಂದು ಗೌರವಾನ್ವಿತ ಸುಪ್ರೀಂ ಕೋರ್ಟ್ ತಿಳಿಸಿದೆ. ಹಾಗಾಗಿ ಕೇಂದ್ರ ಸರ್ಕಾರ ಆದಷ್ಟು ಬೇಗ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಒತ್ತಾಯಿಸಿದರು.